HomeKarnatakaಪದವಿ ಶುಲ್ಕ ಹೆಚ್ಚಳ ಬೆನ್ನಲ್ಲೇ ಪದವಿ ಪೂರ್ವ ಕಾಲೇಜು ಪ್ರವೇಶ ಶುಲ್ಕ ಹೆಚ್ಚಳಕ್ಕೆ ಪ್ರಸ್ತಾವನೆ

ಪದವಿ ಶುಲ್ಕ ಹೆಚ್ಚಳ ಬೆನ್ನಲ್ಲೇ ಪದವಿ ಪೂರ್ವ ಕಾಲೇಜು ಪ್ರವೇಶ ಶುಲ್ಕ ಹೆಚ್ಚಳಕ್ಕೆ ಪ್ರಸ್ತಾವನೆ

ಬೆಂಗಳೂರು: ಪದವಿ ಕಾಲೇಜುಗಳ ಪ್ರವೇಶ ಶುಲ್ಕ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿದ್ದು, ಇದರ ಬೆನ್ನಲ್ಲೇ ಪದವಿ ಪೂರ್ವ ಕಾಲೇಜುಗಳ ಪ್ರವೇಶ ಶುಲ್ಕ ಕೂಡ ಹೆಚ್ಚಳ ಮಾಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

2024 -25 ನೇ ಸಾಲಿನಿಂದ ಪಿಯುಸಿ ಹೆಚ್ಚಳವಾಗುವ ಸಾಧ್ಯತೆ ಇದೆ. ಪಿಯು ಕಾಲೇಜಿನ ಪ್ರವೇಶ ಶುಲ್ಕ ಮಾತ್ರವಲ್ಲ, ಸಂಯೋಜನೆ ಶುಲ್ಕ ನವೀಕರಣ ಶುಲ್ಕ ಸೇರಿದಂತೆ ಎಲ್ಲಾ ರೀತಿಯ ಶುಲ್ಕ ಹೆಚ್ಚಳಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ಮೂರು ವರ್ಷಕ್ಕೊಮ್ಮೆ ಶುಲ್ಕ ಪರಿಷ್ಕರಣೆ ಮಾಡಬೇಕಿರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 2018-19 ರಲ್ಲಿ ಶುಲ್ಕ ಹೆಚ್ಚಳ ಮಾಡಿದ ನಂತರ ಇದುವರೆಗೂ ಶುಲ್ಕ ಹೆಚ್ಚಳ ಮಾಡಿಲ್ಲ. 2013-14ರಲ್ಲಿ ಶೇಕಡ 30ರಷ್ಟು, 2018-19 ರಲ್ಲಿ ಶೇಕಡ 60ರಷ್ಟು ಶುಲ್ಕ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ ಶುಲ್ಕ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular