ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವರ್ಷದ ಮೊದಲ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯ 2024ನೇ ಸಾಲಿನ ಮೊದಲ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಕಾಮಗಾರಿ, ಯೋಜನೆಗಳಿಗೆ ಅನುದಾನ ಒದಗಿಸುವ ನಿರ್ಣಯವನ್ನು ಕೈಗೊಳ್ಳಲಾಗುತ್ತದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಎಲ್ಲಾ ಸಚಿವರು, ಶಾಸಕರುಗಳು, ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಸರ್ಕಾರದ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ, ಲೋಕಸಭೆ ಚುನಾವಣೆಗೆ ತಯಾರಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.