alex Certify BIGG NEWS : ಚಿಕ್ಕಮಗಳೂರಿನಲ್ಲಿ ದಲಿತನ ಮೇಲೆ ಹಲ್ಲೆ ಪ್ರಕರಣ : ನಾಲ್ವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಚಿಕ್ಕಮಗಳೂರಿನಲ್ಲಿ ದಲಿತನ ಮೇಲೆ ಹಲ್ಲೆ ಪ್ರಕರಣ : ನಾಲ್ವರು ಅರೆಸ್ಟ್

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ದಲಿತನ ಮೇಲೆ ಹಲ್ಲೆ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಶಿವರಾಮ್, ರಾಜಪ್ಪ, ಶಂಕರ್, ತಮ್ಮಯ್ಯ ಎಂದು ಗುರುತಿಸಲಾಗಿದೆ.

ಏನಿದು ಘಟನೆ

ಜ.1 ರಂದು ಜಿಲ್ಲೆಯ ತರೀಕೆರೆ ತಾಲೂಕಿನ ಗೇರಮರಡಿ ಗ್ರಾಮದ ಗೊಲ್ಲರ ಬೀದಿಗೆ ದಲಿತ ಯುವಕ ಮಾರುತಿ ಎಂಬುವವರು ಜೆಸಿಬಿ ಜೊತೆ ಕೆಲಸಕ್ಕೆ ಬಂದಿದ್ದರು.ಮಾರುತಿ ದಲಿತ ಯುವಕ ಎಂದು ಗೊತ್ತಾಗುತ್ತಿದ್ದಂತೆ ಆತನ ಮೇಲೆ ಹಲ್ಲೆ ನಡೆಸಿ 20 ಸಾವಿರ ವಸೂಲಿ ಮಾಡಿದ್ದರು. ನಂತರ ಮಾರುತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಘಟನೆ ಸಂಬಂಧ ಜನವರಿ 2 ರಂದು ತರೀಕೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು.  ಸದ್ಯ ನಾಲ್ವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡ 11ಜನರ ಬಂಧನಕ್ಕೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...