alex Certify GOOD NEWS : ಇನ್ಮುಂದೆ ‘ಇಂದಿರಾ ಕ್ಯಾಂಟೀನ್’ , ಶಾಲಾ ಬಿಸಿಯೂಟದಲ್ಲಿ ‘ಸಿರಿಧಾನ್ಯ’ ಬಳಕೆ : CM ಸಿದ್ದರಾಮಯ್ಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಇನ್ಮುಂದೆ ‘ಇಂದಿರಾ ಕ್ಯಾಂಟೀನ್’ , ಶಾಲಾ ಬಿಸಿಯೂಟದಲ್ಲಿ ‘ಸಿರಿಧಾನ್ಯ’ ಬಳಕೆ : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಇನ್ಮುಂದೆ ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ‘ಸಿರಿಧಾನ್ಯ’ ಬಳಕೆ ಮಾಡಲಾಗುತ್ತದೆ, ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಮಾತನಾಡಿದರು.

ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ , ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು.ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ಎಂದರು.

ಎಲ್ಲಿ ಮಳೆ ಕಡಿಮೆ ಬೀಳುತ್ತದೆಯೋ, ಭೂಮಿಯ ಫಲವತ್ತತೆ ಕಡಿಮೆ ಇರುವ ಪ್ರದೇಶಗಳಲ್ಲೂ ಬೆಳೆಯಬಹುದಾದ ಸಿರಿಧಾನ್ಯ ಉತ್ತಮ ಆರೋಗ್ಯಕ್ಕೆ ಸಹಕಾರಿ. ಇದಕ್ಕಾಗಿ ರಾಜ್ಯ ಸರ್ಕಾರ ನಿರಂತರವಾಗಿ ಸಿರಿಧಾನ್ಯ ಮೇಳವನ್ನು ಆಯೋಜಿಸುತ್ತಿದೆ. ಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ ಹೆಚ್ಚಾಗಿವೆ. ಇವತ್ತಿನ ಹಲವು ಕಾಯಿಲೆಗಳಿಗೆ ರಾಸಾಯನಿಕ ಮಿಶ್ರಿತ ಆಹಾರ ಪದಾರ್ಥ ಸೇವನೆ ಕೂಡ ಒಂದು ಪ್ರಮುಖ ಕಾರಣವಾಗಿದೆ ಎಂದು ಅಧ್ಯಯನಗಳು ಹೇಳುತ್ತಿವೆ. ಇದಕ್ಕೆ ಸಾವಯವ ಸಿರಿಧಾನ್ಯ ಸೇವನೆ ಉತ್ತಮ ಪರಿಹಾರ ಆಗುತ್ತದೆ. 2004 ರಲ್ಲಿ ಸಾವಯವ ಕೃಷಿ ನೀತಿ, 2014 ರಲ್ಲಿ ಪರಿಷ್ಕೃತ ಸಾವಯವ ಕೃಷಿ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಆ ಮೂಲಕ ಸಾವಯವ ಮತ್ತು ಸಿರಿಧಾನ್ಯ ಬೆಳೆ ಬೆಳೆಯಲು ನಮ್ಮ ಸರ್ಕಾರ ನಿರಂತರವಾಗಿ ಉತ್ತೇಜನ ನೀಡುತ್ತಿದೆ. ಇದರಿಂದ ಜನರ ಆರೋಗ್ಯಕ್ಕೂ ಬಹಳ ಸಹಕಾರಿಯಾಗುತ್ತಿದೆ ಎಂದರು.

ಇತ್ತೀಚಿನ ವರ್ಷಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಹೆಚ್ಚು ಜನಪ್ರಿಯ ಆಗುತ್ತಿದೆ. ಭಾರತ ಕೃಷಿ ಪ್ರಧಾನ ದೇಶವಾದ್ದರಿಂದ ಆಹಾರ ಸ್ವಾವಲಂಬನೆ ಸಾಧಿಸಲು ಇಂದಿರಾಗಾಂಧಿ ಅವರ ಅವಧಿಯಲ್ಲಿ ಹಸಿರು ಕ್ರಾಂತಿ ನಡೆಸಲಾಯಿತು. ಪ್ರತಿಯೊಬ್ಬರಿಗೂ ಆಹಾರ ಒದಗಿಸಲು ಹಸಿರು ಕ್ರಾಂತಿ ನೆರವಾಯಿತು ಎಂದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...