ತರುಣ್ ಸುಧೀರ್ ನಿರ್ದೇಶನದ, ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಡಿಸೆಂಬರ್ 29 ರಂದು ರಾಜ್ಯದಾದ್ಯಂತ ತೆರೆಕಂಡಿತ್ತು. ಕನ್ನಡ ಭಾಷೆಯಲ್ಲಿ ಮಾತ್ರ ರಿಲೀಸ್ ಆಗಿದ್ದ ಈ ಚಿತ್ರ ಇದೀಗ ಬರೋಬ್ಬರಿ 104.58 ಕೋಟಿ ರೂ. ಕಲೆಕ್ಷನ್ ಮಾಡುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ಈ ಸಂತಸವನ್ನು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
ರಾಕ್ ಲೈನ್ ವೆಂಕಟೇಶ್ ತಮ್ಮ ರಾಕ್ಲೈನ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದು, ಕೆಎಂ ಪ್ರಕಾಶ್ ಅವರ ಸಂಕಲನವಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಆರಾಧನಾ ಸೇರಿದಂತೆ ಶೃತಿ, ಜಗಪತಿ ಬಾಬು, ಕುಮಾರ್ ಗೋವಿಂದ್, ಮಾಸ್ಟರ್ ರೋಹಿತ್, ಅವಿನಾಶ್ ಬಣ್ಣ ಹಚ್ಚಿದ್ದಾರೆ.