ಶಿವಮೊಗ್ಗ : ‘ಯುವನಿಧಿ’ ಯೋಜನೆ ನೋಂದಣಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ’ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು 2022-23 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು https://sevasindhugs.karnataka.gov.in ಗೆ ಭೇಟಿ ನೀಡಿ ಅಥವಾ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯೋಜನೆಗೆ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.

2023 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾಗಿ ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೇ ಇರುವ, ಕರ್ನಾಟಕದಲ್ಲಿ ವಾಸವಿರುವವರು ‘ಯುವನಿಧಿ’ ಯೋಜನೆಯಡಿ ನೋಂದಾಯಿಸಲು ಅರ್ಹರಾಗಿರುತ್ತಾರೆ.

ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಡಿಪ್ಲೊಮಾ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ ಅಭ್ಯರ್ಥಿಯ ಬ್ಯಾಂಕ್ ಪಾಸ್ಪುಸ್ತಕ, ಇತ್ಯಾದಿ ದಾಖಲಾತಿಗಳೊಂದಿಗೆ ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಶಿವಮೊಗ್ಗ ದೂ.ಸಂ: 08182-255293 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read