![](https://kannadadunia.com/wp-content/uploads/2022/10/breaking-news-poster-design-template-d020bd02f944a333be71e17e3a38db24_screen-1.jpg)
ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಮಾರತ್ತಹಳ್ಳಿ ವರ್ತೂರು ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಎಳ್ಳಂಗೋವನ್ ಸೆಂಕತ್ತವಲ್ ಎಂಬುವರು ಮೃತಪಟ್ಟಿದ್ದಾರೆ.
ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ತೆರಳುತ್ತಿದ್ದ ಬೈಕ್ ಸವಾರಿನಿಗೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ವೋಲ್ವ್ ಬಸ್ ಡಿಕ್ಕಿ ಪಡೆದ ಪರಿಣಾಮ ಬೈಕ್ ಸವಾರನ ಮುಖ ಹಾಗೂ ತಲೆಗೆ ಗಾಯವಾಗಿತ್ತು.ಕೂಡಲೇ ಸವಾರನನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ದಾರಿಮಧ್ಯೆಯೇ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.