alex Certify BREAKING : ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು : ಜನವರಿ 9 ರ ಪ್ರತಿಭಟನೆ ಕೈಬಿಟ್ಟ ಬಿಜೆಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು : ಜನವರಿ 9 ರ ಪ್ರತಿಭಟನೆ ಕೈಬಿಟ್ಟ ಬಿಜೆಪಿ

ಬೆಂಗಳೂರು : ಕರಸೇವಕ ಶ್ರೀಕಾಂತ್ ಪೂಜಾರಿಗೆ ಷರತ್ತು ಬದ್ಧ ಜಾಮೀನ ಸಿಕ್ಕಿರುವ ಹಿನ್ನೆಲೆಯಲ್ಲಿ ಬಿಜೆಪಿ ಜನವರಿ 9 ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕೈಬಿಟ್ಟಿದೆ.

ಜನವರಿ 9  ರಂದು ನಿಗದಿಯಾಗಿದ್ದ ಪ್ರತಿಭಟನೆ ವಾಪಸ್‌ ಪಡೆದಿದೆ. ಹುಬ್ಬಳ್ಳಿ ಶಹರಾ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕುವ ನಿರ್ಧಾರವನ್ನು ಕೈಬಿಟ್ಟಿದೆ. ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು ಮಾಡಿ ಹುಬ್ಬಳ್ಳಿಯ 1 ನೇ ಹೆಚ್ಚುವರಿ ಕೋರ್ಟ್ ಆದೇಶ ಹೊರಡಿಸಿದೆ.

ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ 1992ರಲ್ಲಿ ದೇಶಾದ್ಯಂತ ನಡೆದಿದ್ದ ಗಲಭೆಗಳ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪೂಜಾರಿ ವಿರುದ್ಧದ ಜಾಮೀನು ಅರ್ಜಿಯ ಆದೇಶವನ್ನು ಹುಬ್ಬಳ್ಳಿ ನ್ಯಾಯಾಲಯವು ಶುಕ್ರವಾರ ಪ್ರಕಟಿಸಿದೆ.

1992 ರಲ್ಲಿ ರಾಮಮಂದಿರ ಹೋರಾಟ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಾಟೆಯಲ್ಲಿ ಶ್ರೀಕಾಂತ್ ಪೂಜಾರಿ ಭಾಗಿಯಾಗಿದ್ದರು. ಈ ಹಿನ್ನೆಲೆ ಇತ್ತೀಚೆಗೆ ಅವರನ್ನು ಬಂಧಿಸಲಾಗಿತ್ತು . ಇದರಿಂದ ರಾಜ್ಯದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...