ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24 ಸಾಲಿನಲ್ಲಿ ರಾಜ್ಯದಲ್ಲಿ ನೊಂದಾಯಿತ ಮದರಸಾಗಳಲ್ಲಿ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಅರ್ಹ ಮದರಸಾ ಸಂಸ್ಥೆಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದಲ್ಲಿ ನೊಂದಾಯಿತ ಮದರಸಾಗಳಲ್ಲಿ 13-18 ವರ್ಷದ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ಜೊತೆಗೆ ಎರಡು ವರ್ಷಗಳ ಕಾಲ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಹಾಗೂ ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿಯನ್ನು ರಾಜ್ಯ ಮತ್ತು ರಾಷ್ಟ್ರೀಯ ಮುಕ್ತ ಶಾಲೆಗಳಲ್ಲಿ ಎನ್ಐಒಎಸ್ ದೂರ ಶಿಕ್ಷಣದ ನೀಡಲಾಗುತ್ತದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ.18 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಹಾಗು ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.ಹೆಚ್ಚಿನ ವಿವರಗಳಿಗಾಗಿ ಸಹಾಯವಾಣಿ ಮೊ:8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಟೋಬಾ ಹೊನಕಾಂಡೆ ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.