![](https://kannadadunia.com/wp-content/uploads/2022/05/assault-759.jpg)
ಉತ್ತರ ಕನ್ನಡ : ಕುಡುಕರ ಜೊತೆಗೆ ಕೀಟಲೆ ಮಾಡಿದ ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ದೊಣ್ಣೆಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮೆಟ್ರಿಕ್ ನಂತರ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯದಲ್ಲಿ ಕುಡುಕರಿಗೆ ಕೀಟಲೆ ಮಾಡಿದ ವಿದ್ಯಾರ್ಥಿಗಳ ಮೇಲೆ ಕುಡುಕರು ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಹಾಸ್ಟೆಲ್ ನಲ್ಲಿರುವ ವಸ್ತುಗಳನ್ನು ಪುಡಿಗೈಯಲು ಯತ್ನಿಸಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಹಾಸ್ಟೆಲ್ ವಿದ್ಯಾರ್ಥಿಯೊಬ್ಬನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ನಿಲಯ ಪಾಲಕ ನಾಗೇಂದ್ರ ಅವರು ದೂರು ನೀಡಿದ್ದು, ರಾಘವೇಂದ್ರ ಹಾಗೂ ನಂದನ್ ಎಂಬುವರನ್ನು ಶಹರ ಪೊಲೀಸರು ಬಂಧಿಸಿದ್ದಾರೆ.