HomeKarnatakaBIG NEWS : ಸಾರಿಗೆ ಸಿಬ್ಬಂದಿಗಳು ಪ್ರಯಾಣಿಕರಿಂದ 10 ರೂ. ನಾಣ್ಯಗಳನ್ನು ಸ್ವೀಕರಿಸಿ : ರಾಜ್ಯ...

BIG NEWS : ಸಾರಿಗೆ ಸಿಬ್ಬಂದಿಗಳು ಪ್ರಯಾಣಿಕರಿಂದ 10 ರೂ. ನಾಣ್ಯಗಳನ್ನು ಸ್ವೀಕರಿಸಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು :  ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ರೂ.10/-ರ ನಾಣ್ಯಗಳನ್ನು ಸ್ವೀಕರಿಸದಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದು, 10 ರೂ. ನಾಣ್ಯಗಳನ್ನು ಸಿಬ್ಬಂದಿಗಳು ಸ್ವೀಕರಿಸುವಂತೆ ಸೂಚನೆ ನೀಡಿದೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್.‌ ಆದೇಶ ಹೊರಡಿಸಿದ್ದು, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ (2)ರ ಪತ್ರವನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಪತ್ರದಲ್ಲಿ ಕೋರಿರುವಂತೆ ರೂ.10/-ರ ನಾಣ್ಯಗಳ ಚಲಾವಣೆಗಾಗಿ ಪ್ರಯಾಣಿಕರಿಂದ ಸ್ವೀಕರಿಸುವ ಕುರಿತು ಸಂಬಂಧಿಸಿದ ಎಲ್ಲಾ ಸಿಬ್ಬಂದಿಗಳಿಗೆ ಮತ್ತೊಮ್ಮೆ ಸೂಕ್ತ ನಿರ್ದೇಶನ ನೀಡಲು ಕ್ರಮವಹಿಸುವಂತೆ ಕೋರಲು ನಿರ್ದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular