ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭಕ್ಕೆ ಸರ್ಕಾರ ಸಿದ್ದತೆ ನಡೆಸಿದ್ದು, ತುಮಕೂರಿನಲ್ಲಿ ಜಾಗ ಗುರುತು ಮಾಡಿದೆ.
ಹೌದು. ಈಗಾಗಲೇ ಮಂಗಳೂರು ಮತ್ತು ಬೆಂಗಳೂರಿನ ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಿದ್ದು, ಈ ಬಳಿಕ ತುಮಕೂರು ಸಮೀಪ ಹೊಸ ವಿಮಾನ ನಿಲ್ದಾಣ ಆರಂಭಿಸಲು ಸರ್ಕಾರ ಸಿದ್ದತೆ ನಡೆಸಿದೆ.
ತುಮಕೂರು, ಮಧುಗಿರಿ, ಕೊರಟಗೆರೆ ಹಾಗೂ ಶಿರಾ ತಾಲೂಕಿನ ಮಧ್ಯಭಾಗದಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ಹತ್ತಿರ ಇರುವ ಎಂಟು ಸಾವಿರ ಎಕರೆ ಜಮೀನು ಜಾಗ ಗುರುತಿಸಿ ಅಧಿಕಾರಿಗಳು ಕೆಐಡಿಬಿಗೆ ಪ್ರಸ್ತಾವ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ದೇವನಹಳ್ಳಿ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿ ನಿಮಿಷಕ್ಕೊಂದು ವಿಮಾನ ಟೆಕ್ ಆಫ್ ಮತ್ತು ಲ್ಯಾಡಿಂಗ್ ಆಗುತ್ತಿದೆ. ಹೀಗಾಗಿ ಒತ್ತಡ ತಗ್ಗಿಸಲು ಮತ್ತೊಂದು ವಿಮಾನ ಅಂತರಾಷ್ಟ್ರೀಯ ನಿಲ್ದಾಣ ಪ್ರಾರಂಭಿಸಲು ಸರ್ಕಾರ ನಿರ್ಧಸಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ಸರ್ಕಾರ ಈ ವಿಮಾನ ನಿಲ್ದಾಣ ನಿರ್ಮಿಸಲು ಸಜ್ಜಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.