HomeKarnatakaBREAKING : ಹುಬ್ಬಳ್ಳಿ ಗಲಭೆ ಕೇಸ್ : ಜೈಲಿನಿಂದ ಕರಸೇವಕ 'ಶ್ರೀಕಾಂತ್ ಪೂಜಾರಿ' ಬಿಡುಗಡೆ

BREAKING : ಹುಬ್ಬಳ್ಳಿ ಗಲಭೆ ಕೇಸ್ : ಜೈಲಿನಿಂದ ಕರಸೇವಕ ‘ಶ್ರೀಕಾಂತ್ ಪೂಜಾರಿ’ ಬಿಡುಗಡೆ

ಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಹಿನ್ನೆಲೆ  ಜೈಲಿನಿಂದ ಕರಸೇವಕ ಶ್ರೀಕಾಂತ್ ಪೂಜಾರಿ ಬಿಡುಗಡೆಯಾಗಿದ್ದಾರೆ.

 ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ, ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಬಿಡುಗಡೆ ಮಾಡುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 32 ವರ್ಷಗಳ ಬಳಿಕ ಶ್ರೀಕಾಂತ್ ಪೂಜಾರಿಯನ್ನು ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ಬಂಧಿಸಿದ್ದರು. ಜ.5ರಂದು ಕೋರ್ಟ್ ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಇಬ್ಬರ ಶ್ಯೂರಿಟಿ, 1 ಲಕ್ಷ ಮೌಲ್ಯದ 2 ಬಾಂಡ್ ಸೇರಿದಂತೆ ಇದೀಗ ಜಾಮೀನು ಷರತ್ತು ಪೂರೈಸಿರುವ ಹಿನ್ನೆಲೆಯಲ್ಲಿ ಶ್ರೀಕಾಂತ್ ಪೂಜಾರಿಯನ್ನು  ಬಿಡುಗಡೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮಜನ್ಮಭೂಮಿ ಹೋರಾಟ ಪ್ರಕರಣದ ಮೂರನೇ ಆರೋಪಿ ಶ್ರೀಕಾಂತ್ ಪೂಜಾರಿ ಎಂಬಾತನನ್ನು ಹುಬಳ್ಳಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. 1995 ಡಿಸೆಂಬರ್ 5ರಂದು ಹುಬ್ಬಳ್ಳಿ ನಗರದಲ್ಲಿ ಕರಸೇವೆ ವೇಳೆ ಗಲಭೆ ಸಂಭವಿಸಿ ಒಂದು ಮಳಿಗೆಗೆ ಬೆಂಕಿ ಹಚ್ಚಲಾಗಿತ್ತು. ಪ್ರಕರಣ ಸಂಬಂಧ 9 ಜನರ ವಿರುದ್ಧ ಹುಬ್ಬಳ್ಳಿ ಶಹರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. 31 ವರ್ಷಗಳ ಬಳಿಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular