ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ |Scholarship

ಮಡಿಕೇರಿ : ಕುಶಾಲನಗರ ಪುರಸಭೆಯ ನಗರ ಬಡಜನರ ಕಲ್ಯಾಣಕ್ಕಾಗಿ ಶೇ.7.25 ರ ಅನುದಾನದಡಿ ಕುಶಾಲನಗರ ಪುರಸಭೆ ವ್ಯಾಪ್ತಿಯ ನಗರ ಬಡಜನರ ಕಲ್ಯಾಣಕ್ಕಾಗಿ ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯೊಂದಿಗೆ ಪಡಿತರ ಚೀಟಿ, ಆಧಾರ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ 01 ಭಾವಚಿತ್ರ, ಆದಾಯ ದೃಢೀಕರಣ ಪತ್ರ(ಆದಾಯವು 3 ಲಕ್ಷದೊಳಗಿರಬೇಕು), ವ್ಯಾಸಂಗ ದೃಢೀಕರಣ ಪತ್ರ ಸಲ್ಲಿಸಬೇಕು. ಅರ್ಜಿದಾರರ ಆಯ್ಕೆಯನ್ನು ಪುರಸಭೆ ಕಾಯ್ದಿರಿಸಿಕೊಂಡಿದೆ.

ಈ ಸೌಲಭ್ಯ ಪಡೆದುಕೊಳ್ಳಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಜನವರಿ, 09 ರ ಸಂಜೆ 5.30 ಗಂಟೆಯೊಳಗೆ ಮುಖ್ಯಾಧಿಕಾರಿ ಪುರಸಭೆ, ಕುಶಾಲನಗರ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಕುಶಾಲನಗರ ಪುರಸಭೆ ಕಚೇರಿಯಲ್ಲಿ ಪಡೆಯಬಹುದು ಎಂದು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಅವರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read