ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮಮಂದಿರಕ್ಕೆ 11 ಕೋಟಿ ರೂ. ದೇಣಿಗೆ ನೀಡಿದ್ದಾರೆ.
ಪವಿತ್ರ ನಗರಕ್ಕೆ ಭೇಟಿ ನೀಡಿರುವ ರಾಜ್ಯ ಕೈಗಾರಿಕಾ ಸಚಿವ ಉದಯ್ ಸಮಂತ್ ಅವರು ಈ ಮಾಹಿತಿಯನ್ನು ಒದಗಿಸಿದ್ದಾರೆ.
ಮಹಾರಾಷ್ಟ್ರ ಮತ್ತು ಶಿವಸೇನೆ ಪರವಾಗಿ, ಮಹಾರಾಷ್ಟ್ರ ಸಿಎಂ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ರಾಮ ಮಂದಿರಕ್ಕಾಗಿ 11 ಕೋಟಿ ರೂ.ಗಳನ್ನು ನೀಡಿದ್ದಾರೆ. ಇಂದು ನಾವು ಚೆಕ್ ಹಸ್ತಾಂತರಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಸಮಂತ್ ಅಯೋಧ್ಯೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಏಕನಾಥ್ ಶಿಂಧೆ ಅವರ ಪುತ್ರ ಹಾಗೂ ಸಂಸದ ಶ್ರೀಕಾಂತ್ ಶಿಂಧೆ ಇತರರೊಂದಿಗೆ ಸಮಂತ್ ಜೊತೆ ಅಯೋಧ್ಯೆಗೆ ತೆರಳಿದ್ದರು. 11 ಕೋಟಿ ಮೌಲ್ಯದ ಚೆಕ್ ಅನ್ನು ರಾಮ ಮಂದಿರ ಟ್ರಸ್ಟ್‌ಗೆ ಹಸ್ತಾಂತರಿಸಲಾಗಿದೆ ಎಂದು ಸಮಂತ್ ಮಾಹಿತಿ ನೀಡಿದ್ದಾರೆ.