HomeKarnatakaಜಾಮೀನು ಪಡೆದರೂ ತಪ್ಪದ ಸಂಕಷ್ಟ: ನಾರಾಯಣಗೌಡ ಮತ್ತೆ ವಶಕ್ಕೆ ಪಡೆಯಲು ಪೊಲೀಸರ ಸಿದ್ಧತೆ

ಜಾಮೀನು ಪಡೆದರೂ ತಪ್ಪದ ಸಂಕಷ್ಟ: ನಾರಾಯಣಗೌಡ ಮತ್ತೆ ವಶಕ್ಕೆ ಪಡೆಯಲು ಪೊಲೀಸರ ಸಿದ್ಧತೆ

ಬೆಂಗಳೂರು: ಜಾಮೀನು ಪಡೆದರೂ ಕರವೇ ಅಧ್ಯಕ್ಷ ನಾರಾಯಣಗೌಡರಿಗೆ ಸಂಕಷ್ಟ ತಪ್ಪಿಲ್ಲ. ವಾರೆಂಟ್ ಮೇಲೆ ಮತ್ತೆ ಅವರನ್ನು ವಶಕ್ಕೆ ಪಡೆಯಲು ಎರಡು ಠಾಣೆಗಳ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಹಳೆ ಪ್ರಕರಣಗಳ ಸಂಬಂಧ ಮತ್ತೆ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿ ಲೇಔಟ್, ಹಲಸೂರು ಗೇಟ್ ಠಾಣೆ ಪೊಲೀಸರು ಇದಕ್ಕಾಗಿ ತಯಾರಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 2017ರಲ್ಲಿ ಎನ್‌ಡಿಎಂಎ ಆಕ್ಟ್ ನಡಿ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಮತ್ತೊಂದು ಕೇಸ್ ದಾಖಲಾಗಿತ್ತು. ನಾರಾಯಣ ಗೌಡರ ವಿರುದ್ಧ 2 ಕೇಸ್ ಗಳ ಸಂಬಂಧ ವಾರೆಂಟ್ ಮೇಲೆ ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಹಿರಿಯ ಅಧಿಕಾರಿಗಳ ಸೂಚನೆಯಂತೆ ಪೊಲೀಸರು ನಾರಾಯಣಗೌಡರ ವಿರುದ್ಧದ ಹಳೆ ಕೇಸ್ ಗಳನ್ನು ಕೆದಕುತ್ತಿದ್ದಾರೆ. ಬೆಂಗಳೂರಿನ ಎಲ್ಲಾ ಠಾಣೆಗಳ ಕೇಸ್ ರೀ ಓಪನ್ ಮಾಡಿ ಮರು ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular