![](https://kannadadunia.com/wp-content/uploads/2021/04/vidhana-soudha-1-800x445-1.jpg)
ಕಲಬುರಗಿ : ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, , ಜನವರಿ ಕೊನೆಯಲ್ಲಿ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ ಕೊನೆಯಲ್ಲಿ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಕ್ರಮ ಕೈಗೊಳ್ಳಲಾಗಿದ್ದು, ನಂತರ ಪ್ರಾದೇಶಿಕ, ಜಿಲ್ಲಾ ಮಟ್ಟದಲ್ಲಿಯೂ ಸಹ ಉದ್ಯೋಗ ಮೇಳ ಆಯೋಜಿಸಲಾಗುವುದು. ಕರ್ನಾಟಕ ಕೌಶಲ್ಯ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಿದ ಅಭ್ಯರ್ಥಿಗಳು ಕೂಡಾ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಗೃಹ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸೇರಿದಂತೆ ಸುಮಾರು 2.40 ಲಕ್ಷ ಹುದ್ದೆಗಳು ಖಾಲಿ ಇದ್ದು, ಈ ಎಲ್ಲ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಈ ವಿಚಾರದಲ್ಲಿ ಸರ್ಕಾರ ತನ್ನ ಬದ್ಧತೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಕೇವಲ ನಿರುದ್ಯೋಗ ಭತ್ಯೆ ನೀಡುವುದರ ಜೊತೆಗೆ ಕೌಶಲ್ಯ ಅಭಿವೃದ್ದಿಗೂ ಒತ್ತು ನೀಡಲಿದ್ದು, ಉತ್ಕೃಷ್ಟ ಮಟ್ಟದ ಮಾನವ ಸಂಪನ್ಮೂಲ ಉತ್ಪನ್ನ ಮಾಡುವ ನಿಟ್ಟಿನಲ್ಲಿ ಕೌಶಲ್ಯ ಸಲಹಾ ಸಮಿತಿ ರಚನೆ ಮಾಡಿದ್ದು, ನಾನಷ್ಟೇ ಅಲ್ಲದೇ ಸಚಿವ ಶರಣಪ್ರಕಾಶ ಪಾಟೀಲ್ ಅವರು ಸಹ ಈ ಸಮಿತಿಯಲ್ಲಿದ್ದು ಕರ್ನಾಟಕ ಕೌಶಲ್ಯ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸುವ ಅಭ್ಯರ್ಥಿಗಳಿಗೆ ಖಾಸಗಿ ಅಥವಾ ಸರ್ಕಾರದ ಸಹಯೋಗದೊಂದಿಗಿನ ಸಂಸ್ಥೆಗಳ ಮೂಲಕ ಸೂಕ್ತ ಕೌಶಲ್ಯ ತರಬೇತಿ ನೀಡಲಾಗುವುದು. ಆ ಮೂಲಕ ಅಂತಹ ಅಭ್ಯರ್ಥಿಗಳು ಕೆಲಸ ಪಡೆದುಕೊಳ್ಳುವಲ್ಲಿ ಅನುಕೂಲವಾಗುವಂತಹ ವಾತಾವರಣ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.