![](https://kannadadunia.com/wp-content/uploads/2024/01/NPS-.jpg)
ಬೆಂಗಳೂರು : ಹಳೆಯ ಪಿಂಚಣಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ರದ್ದತಿ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ಪದಾಧಿಕಾರಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಎನ್.ಪಿ.ಎಸ್ ರದ್ದತಿ ಸಂಬಂಧ ಚರ್ಚಿಸಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಎನ್.ಪಿ.ಎಸ್ ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು. ಎನ್.ಪಿ.ಎಸ್ ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಇದನ್ನು ರದ್ದು ಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತು ಸಹ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲಿದೆ ಎಂದು ತಿಳಿಸಿದ್ದಾರೆ.