HomeKarnatakaBIG NEWS: ಮುಂದಿನ ಮೂರು ತಿಂಗಳ ಕಾಲ ರಾಜ್ಯದಲ್ಲಿ ಆಗಾಗ ಮಳೆ ಮುನ್ಸೂಚನೆ

BIG NEWS: ಮುಂದಿನ ಮೂರು ತಿಂಗಳ ಕಾಲ ರಾಜ್ಯದಲ್ಲಿ ಆಗಾಗ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಮೂರು ತಿಂಗಳ ಕಾಲ ರಾಜ್ಯದಲ್ಲಿ ಆಗಾಗ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೇಸಿಗೆಯ ಬಿಸಿಲಿನ ತಾಪಕ್ಕೆ ತಂಪೆರೆಯುವ ರೀತಿ ವಾಡಿಕೆಗಿಂತ ತುಸು ಹೆಚ್ಚಿನ ಮಳೆಯಾಗಲಿದೆ. ಜನವರಿ, ಫೆಬ್ರವರಿ, ಮಾರ್ಚ್ ಅವಧಿಯಲ್ಲಿ 15.4 ಮಿಲಿಮೀಟರ್ ನಷ್ಟು ವಾಡಿಕೆ ಮಳೆಯಾಗುತ್ತದೆ. ಈ ಪ್ರಮಾಣ ಮತ್ತು ಇದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದ್ದು, ರಾಜ್ಯದಲ್ಲಿ ಸ್ವಲ್ಪಮಟ್ಟಿಗೆ ನೀರಿನ ಬವಣೆ ಕಡಿಮೆ ಮಾಡುತ್ತದೆ. ಅಲ್ಲದೇ, ಬೇಸಿಗೆಯಲ್ಲಿ ಬಿಸಿಲಿನ ತಾಪ ಕಡಿಮೆ ಮಾಡಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನವರಿ, ಫೆಬ್ರವರಿ, ಮಾರ್ಚ್ ನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಂಭವ ಇದೆ ಎಂದು ಹೇಳಿರುವುದರಿಂದ ಹಿಂಗಾರು, ಮುಂಗಾರು ಮಳೆ ಕೊರತೆಯಿಂದ ಕಂಗಾಳದ ರೈತರಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular