HomeLatest Newsಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಪ್ರಕಟ | India vs England

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಪ್ರಕಟ | India vs England

ಮುಂಬೈ :   ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಟೆಸ್ಟ್ ಪಂದ್ಯಗಳ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದ್ದು, ಜನವರಿ 25 ರಿಂದ ಸರಣಿ ಆರಂಭವಾಗಲಿದೆ. 

ಜನವರಿ 25 ರಿಂದ  ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)

ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)

ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್​ಕೋಟ್)

ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)

ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)

ಬಿಸಿಸಿಐ ಶನಿವಾರ ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯಗಳಿಗೆ 13 ಸದಸ್ಯರ ಭಾರತ ಎ ತಂಡವನ್ನು ಪ್ರಕಟಿಸಿದೆ. ಜನವರಿ 12ರಿಂದ ಆರಂಭವಾಗಲಿರುವ ಎರಡು ದಿನಗಳ ಅಭ್ಯಾಸ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಗ್ರೌಂಡ್ ‘ಬಿ’ಯಲ್ಲಿ ನಡೆಯಲಿದೆ. ಜನವರಿ 17ರಿಂದ ಆರಂಭವಾಗಲಿರುವ ಮೊದಲ ನಾಲ್ಕು ದಿನಗಳ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾರತ ‘ಎ’ ತಂಡ: ಅಭಿಮನ್ಯು ಈಶ್ವರನ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಪ್ರದೋಶ್ ರಂಜನ್ ಪಾಲ್, ಕೆಎಸ್ ಭರತ್ (ವಿಕೆಟ್ ಕೀಪರ್), ಮಾನವ್ ಸುತಾರ್, ಪುಲ್ಕಿತ್ ನಾರಂಗ್, ನವದೀಪ್ ಸೈನಿ, ತುಷಾರ್ ದೇಶಪಾಂಡೆ, ವಿದ್ವತ್ ಕಾವೇರಪ್ಪ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆಕಾಶ್ ದೀಪ್

For Latest News Updates, Join Our Whatsapp Community🚩
RELATED ARTICLES

Most Popular