ಕಲಬುರ್ಗಿ: ಚಲಿಸುತ್ತಿದ್ದ ಓಮ್ನಿ ವ್ಯಾನ್ ನ ಟೈರ್ ಬ್ಲಾಸ್ಟ್ ಆಗಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ಹೊತ್ತಿ ಉರಿದ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿ ನಡೆದಿದೆ.
ಯಾದಗಿರಿಯಿಂದ ಕಲಬುರ್ಗಿಗೆ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಏಕಾಏಕಿ ಓಮ್ನಿ ವ್ಯಾನ್ ಟೈರ್ ಬ್ಲಾಸ್ಟ್ ಆಗಿದ್ದು, ವ್ಯಾನ್ ಪಲ್ಟಿಯಾಗಿ ಬಿದ್ದಿದೆ. ತಕ್ಷಣ ವ್ಯಾನ್ ಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ವ್ಯಾನ್ ನಲ್ಲಿದ್ದ ಓರ್ವನಿಗೆ ಗಂಭೀರವಾದ ಗಾಯಗಳಾಗಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಚಿತ್ತಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.