HomeKarnatakaBREAKING NEWS: ತಡರಾತ್ರಿ ರಾಕಿಂಗ್ ಸ್ಟಾರ್ ಯಶ್ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು...

BREAKING NEWS: ತಡರಾತ್ರಿ ರಾಕಿಂಗ್ ಸ್ಟಾರ್ ಯಶ್ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವು, 3 ಮಂದಿ ಗಂಭೀರ

ಗದಗ: ನಟ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ದುರಂತ ಸಂಭವಿಸಿದೆ.

ಹನುಮಂತ ಹರಿಜನ(21), ಮುರಳಿ ನಡುವಿನಮನೆ(20), ನವೀನ್(19) ಮೃತಪಟ್ಟವರು ಎಂದು ಹೇಳಲಾಗಿದೆ. ದುರಂತದಲ್ಲಿ ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಜುನಾಥ, ದೀಪಕ್, ಪ್ರಕಾಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ತಡರಾತ್ರಿ ನೀಲಗಿರಿ ತೋಪಿನಲ್ಲಿ ಯಶ್ ಬರ್ತಡೇ ಬ್ಯಾನರ್ ಕಟ್ಟುವಾಗ ದುರಂತ ಸಂಭವಿಸಿದೆ. ಯಶ್ ಅವರ ಅಭಿಮಾನಿಗಳಾಗಿದ್ದ ಯುವಕರು ನೆಚ್ಚಿನ ನಟನ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಬ್ಯಾನರ್ ಕಟೌಟ್ ಕಟ್ಟಿ ಮೇಲೆತ್ತಿ ನಿಲ್ಲಿಸುವಾಗ ಕರೆಂಟ್ ವೈರ್ ತಗುಲಿ ವಿದ್ಯುತ್ ಪ್ರವಹಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular