alex Certify ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣಪ್ಪನಕೊಪ್ಪಲು ಗ್ರಾಮದ ಬಳಿ ಅಪಘಾತ ನಡೆದಿದೆ.

ಅಮಾನುಲ್ಲಾ ಖಾನ್, ಮುನಾವರ್ ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ರಾಮನಗರ ಜಿಲ್ಲೆ ಚನ್ನಪಟ್ಟಣ ಮೂಲದವರು. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೃಷ್ಣಪ್ಪನ ಕೊಪ್ಪಲು ಗ್ರಾಮದ ಬಳಿ ಹಿಂದಿನಿಂದ ಬಂದ ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...