ಮಂಗಳೂರು: ಮಂಗಳೂರು ನಗರದ ಉರ್ವ ಸ್ಟೋರ್ ನಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ವಿರುದ್ಧ ಆರೋಪ ಮಾಡಿರುವ ಮಹಿಳಾ ಸಿಬ್ಬಂದಿ ಉರ್ವ ಠಾಣೆಗೆ ದೂರು ನೀಡಿದ್ದಾರೆ. ಮನ್ಸೂರ್ ಅಲಿ ಲೈಂಗಿಕ, ಮಾನಸಿಕ, ದೈಹಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಶುಕ್ರವಾರ ಮಹಿಳಾ ಸಿಬ್ಬಂದಿ ದೂರು ನೀಡಿದ್ದಾರೆ. ಆಯುಕ್ತರ ವಿರುದ್ಧ ಐಪಿಸಿ ಸೆಕ್ಷನ್ 354, 354ಎ ಅಡಿ ಉರ್ವ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.