HomeKarnatakaBREAKING : ಫೆ 24 , 25 ರಂದು ಬೆಂಗಳೂರಲ್ಲಿ ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ...

BREAKING : ಫೆ 24 , 25 ರಂದು ಬೆಂಗಳೂರಲ್ಲಿ ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ’ : CM ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶದ ಆಯೋಜನೆ ಕುರಿತ ಪೂರ್ವಾಭಾವಿ ಸಭೆ ನಡೆದಿದೆ.

ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಸಂವಿಧಾನ ಜಾರಿಗೆ ಬಂದು 75 ವರ್ಷಾಚರಣೆಯ ಅಂಗವಾಗಿ “ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ”ವನ್ನು Institute of Social and Economic Change (ISEC), National Law School of India University, Bengaluru ಇವರ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿದೆ ಎಂದರು.

ಸಂವಿಧಾನದ ಮಹತ್ವ ಹಾಗೂ ಮೌಲ್ಯದ ಕುರಿತು ಅರಿವು ಮೂಡಿಸುವುದು ಹಾಗೂ ರಾಷ್ಟ್ರೀಯ ಏಕತೆಯನ್ನು ಎತ್ತಿಹಿಡಿಯುವುದು ಸಮಾವೇಶದ ಉದ್ದೇಶವಾಗಿದೆ.ಸಮಾವೇಶಕ್ಕೆ ಪೂರ್ವಭಾವಿಯಾಗಿ ಜನವರಿ 26 ರಿಂದ “ಸಂವಿಧಾನ ಜಾಗೃತಿ ಜಾಥಾ” ಆಯೋಜಿಸಲಾಗುವುದು. ಈ ಜಾಥಾವು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಸಂವಿಧಾನದ ಮಹತ್ವ, ರಾಷ್ಟ್ರೀಯ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಫೆಬ್ರವರಿ 24 ಹಾಗೂ 25ರಂದು ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ವಿಚಾರ ಸಂಕಿರಣ ಹಾಗೂ KREIS ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಲಾಗುವುದು ಎಂದರು.

ಸಮಾರೋಪ ಸಮಾರಂಭದಲ್ಲಿ ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ವಿವಿಧ ವಿಷಯಗಳ ಕುರಿತ ಪರಿಣತರ ಚರ್ಚೆಯನ್ನು ಆಧರಿಸಿ, ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.ಇಂದಿನ ಸಮಾಜ ಎದುರಿಸುತ್ತಿರುವ ಎಲ್ಲ ಸಮಸ್ಯೆ, ಸವಾಲುಗಳಿಗೆ ಸಂವಿಧಾನದಲ್ಲಿ ಉತ್ತರವಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.ಸಮಾವೇಶದಲ್ಲಿ ಅತ್ಯುತ್ತಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಅತಿಥಿಗಳನ್ನು ಆಹ್ವಾನಿಸಿ, ಅತ್ಯುತ್ತಮ ಚರ್ಚಾಗೋಷ್ಠಿಗಳನ್ನು ಆಯೋಜಿಸುವಂತೆ ಇಂದಿನ ಪೂರ್ವಾಭಾವಿ ಸಭೆಯಲ್ಲಿ ಸೂಚಿಸಲಾಯಿತು ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಸಚಿವರಾದ ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular