
ಈ ಕುರಿತು ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಅಯೋಧ್ಯೆ ರಾಮಮಂದಿರದಲ್ಲಿ ರಾಮನ ಪ್ರತಿಷ್ಠಾಪನೆ ಮಾಡುವ ವೇಳೆ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ತಿಳಿಸಿದ್ದೇನೆ ಎಂದರು.
ಕೇವಲ ರಾಮನ ದೇವಾಲಯ ಮಾತ್ರ ವಲ್ಲ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಪೂಜೆ ಸಲ್ಲಿಸಬೇಕು . ಪೂಜೆಯ ಕ್ರಮಗಳ ಈ ಬಗ್ಗೆ ಮುಜರಾಯಿ ಇಲಾಖೆ ಆಯು ಕರು ಪ್ರತ್ಯೇಕ ಸುತ್ತೋಲೆ ಹೊರಡಿಸಲಿದ್ದಾರೆ. ಜ.22ರಂದು ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡುವ ಹೊತ್ತಿನಲ್ಲಿ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಬೇಕು ಎಂದರು.
ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಜ.22 ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸೂಚನೆ ನೀಡಿದ್ದೇನೆ. #RamalingaReddy #Karnataka #RamMandirAyodhya #RamMandir #HinduTemple pic.twitter.com/2eTCR9NaJN
— Ramalinga Reddy (@RLR_BTM) January 7, 2024

