HomeKarnatakaBIG UPDATE: ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಕೇಸ್; ಉಪತಹಶಿಲ್ದಾರ್ ಸಸ್ಪೆಂಡ್

BIG UPDATE: ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಕೇಸ್; ಉಪತಹಶಿಲ್ದಾರ್ ಸಸ್ಪೆಂಡ್

ಮೈಸೂರು: ಕಿರುಕುಳಕ್ಕೆ ಬೇಸತ್ತು ವಿಕಲಚೇತನ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪತಹಶೀಲ್ದಾರ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಚೇರಿಯ ಕಂಪ್ಯೂಟರ್ ಆಪರೇಟರ್ ಪರಮೇಶ್, ಉಪತಹಶೀಲ್ದಾರ್ ಶಿವಕುಮಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಮಾಡಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದೀಗ ಉಪತಹಶೀಲ್ದಾರ್ ಶಿವಕುಮಾರ್ ಅವರನ್ನು ಅಮಾನತು ಮಾಡಿ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಮೇಶ್, ಉಪತಹಶೀಲ್ದಾರ್ ಶಿವಕುಮಾರ್ ಕಿರುಕುಳಕ್ಕೆ ಬೇಸತ್ತಿದ್ದು, ನನ್ನ ಸಾವಿಗೆ ಶಿವಕುಮಾರ್ ಕಾರಣ ಎಂದು ಡೆತ್ ನೋಟ್ ಬರೆದು, ವಾಟ್ಸಪ್ ಸ್ಟೇಟಸ್ ಹಾಕಿ ಬಳಿಕ ವಿಷ ಸೇವಿಸಿದ್ದರು. ಅವರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪರಮೇಶ್ ಸಾವನ್ನಪ್ಪಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular