alex Certify BREAKING : ಮೂವರು ಅಭಿಮಾನಿಗಳ ದಾರುಣ ಸಾವು , ಸಾಂತ್ವನ ಹೇಳಲು ಗದಗಕ್ಕೆ ಬಂದ ನಟ ಯಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮೂವರು ಅಭಿಮಾನಿಗಳ ದಾರುಣ ಸಾವು , ಸಾಂತ್ವನ ಹೇಳಲು ಗದಗಕ್ಕೆ ಬಂದ ನಟ ಯಶ್

ಹುಬ್ಬಳ್ಳಿ : ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.

ಘಟನೆ ಹಿನ್ನೆಲೆ ನಟ ಯಶ್ ಗೋವಾದಿಂದ ಹುಬ್ಬಳ್ಳಿ ಏರ್ ಪೋರ್ಟ್ ಗೆ ಆಗಮಿಸಿದ್ದು, ನಂತರ ಅಲ್ಲಿಂದ ಕಾರಿನಲ್ಲಿ ಗದಗದತ್ತ ಪ್ರಯಾಣ ಬೆಳೆಸಿದ್ದಾರೆ. 1 ಗಂಟೆಯೊಳಗೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ನಟ ಯಶ್ ಭೇಟಿ ನೀಡಲಿದ್ದಾರೆ. ನಟ ಯಶ್ ಅವರನ್ನು ನೋಡಲು ಗ್ರಾಮದಲ್ಲಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದಾರೆ. ಜನರು ಮನೆಯ ಛಾವಣಿ, ಕಟ್ಟಡಗಳನ್ನು ಏರಿ ಕುಳಿತಿದ್ದಾರೆ.

ಗ್ರಾಮಕ್ಕೆ ನಟ ಯಶ್ ಭೇಟಿ ನೀಡುವ ಹಿನ್ನೆಲೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ಬಂದೋಬಸ್ತ್ ಮಾಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...