alex Certify ಜ. 23 ರಂದು ʻPSIʼ ನೇಮಕಾತಿಯ ಮರು ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜ. 23 ರಂದು ʻPSIʼ ನೇಮಕಾತಿಯ ಮರು ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜ. 23 ರಂದು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ನೇರ ನೇಮಕಾತಿಯ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಸಂಕ್ಷಿಪ್ತ ಸೂಚನೆಗಳು ಮತ್ತು ವೇಳಾಪಟ್ಟಿ ಈ ಕೆಳಗೆ ನೀಡಲಾಗಿದೆ.

  • ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ತಪಾಸಣೆಗೆ ಒಳಪಡುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8.30 ಕ್ಕೆ ಸರಿಯಾಗಿ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಲು ಸೂಚಿಸಿದೆ.
  • ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಅಂದರೆ, ಡ್ರೈವಿಂಗ್ ಲೈಸೆನ್ಸ್ / ಪಾಸ್‌ಪೋರ್ಟ್ / ಆಧಾರ್ ಕಾರ್ಡ್ / ಪಾನ್ ಕಾರ್ಡ್ / ಮತದಾರರ ಗುರುತಿನ ಚೀಟಿ ಹಾಜರುಪಡಿಸಿದರೆ ಮಾತ್ರ ಅಭ್ಯರ್ಥಿಯನ್ನು ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಬಿಡಲಾಗುವುದು.
  • ಮೊಬೈಲ್ ಗಳನ್ನು ನಿಷೇಧಿಸಲಾಗಿದ್ದು, ಮೊಬೈಲ್ ನಲ್ಲಿ ಗುರುತಿನ ಚೀಟಿಯನ್ನು ತೋರಿಸುವಂತಿಲ್ಲ ಮತ್ತು ಅಂತಹ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡುವುದಿಲ್ಲ.
  • ಅಭ್ಯರ್ಥಿಗಳು ಸಾಧ್ಯವಾದಷ್ಟು ಕಾಲರ್‌ಗಳು ಇಲ್ಲದೆ ಇರುವ ಶರಟುಗಳನ್ನು ಹಾಕಿಕೊಳ್ಳುವುದು.
  • ಯಾವುದೇ ತೆರನಾದ ಜೀನ್ಸ್ ಪ್ಯಾಂಟ್, ಬೆಲ್ಟ್, ಶೂ ಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ಇರುವುದಿಲ್ಲ.
  • ಕಿವಿ ಅಥವಾ ಬಾಯಿಯನ್ನು ಮುಚ್ಚಿಕೊಳ್ಳುವಂತಹದನ್ನು ಧರಿಸಿ ಅಥವಾ ಯಾವುದೇ ರೀತಿಯ ಫೇಸ್ ಮಾಸ್ಕ್ ಅನ್ನೂ ಸಹ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸುವಂತಿಲ್ಲ.
  • ವಾಟರ್ ಬಾಟಲ್ ಗಳನ್ನು ಅನುಮತಿಸುವುದಿಲ್ಲ. ಪ್ರಾಧಿಕಾರದ ವೆಬ್‌ ಸೈಟಿನಲ್ಲಿ ಪ್ರಕಟಿಸಲಾಗುವ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು.
  • ಮೊದಲನೆ ಅವಧಿ ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಗೆ ಹೋಗಲು ಅನುಮತಿಸುವುದಿಲ್ಲ.
  • ಕಾಲ ಕಾಲಕ್ಕೆ ಪ್ರಾಧಿಕಾರದ ವೆಬ್‌ ಸೈಟಿನಲ್ಲಿ ಪ್ರಕಟಿಸಲಾಗುವ ಸೂಚನೆಗಳನ್ನು ಅಭ್ಯರ್ಥಿಗಳು ತಪ್ಪದೆ ಪಾಲಿಸತಕ್ಕದ್ದು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...