![](https://kannadadunia.com/wp-content/uploads/2021/05/Vidhana_Soudha_750_1-1.gif)
ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ವಿವಿಧ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಜಿಮ್, ಫಿವೈಸ್, ಬ್ಯೂಟೀಷಿಯನ್, ವೀಡಿಯೋಗ್ರಾಫಿ, ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಪರಿಶಿಷ್ಟ ಜಾತಿ ಯುವ ಜನರು ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಜ.16 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
![](https://kannadadunia.com/wp-content/uploads/2024/01/WhatsApp-Image-2024-01-08-at-9.24.21-PM.jpeg)