HomeKarnatakaಫೆಬ್ರುವರಿ 24, 25 ರಂದು ʻಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶʼ ಆಯೋಜನೆ

ಫೆಬ್ರುವರಿ 24, 25 ರಂದು ʻಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶʼ ಆಯೋಜನೆ

ಬೆಂಗಳೂರು : ಫೆಬ್ರುವರಿ 24 ಹಾಗೂ 25  ರಂದು ಅರಮನೆ ಮೈದಾನದಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ’ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದೆ.

ಸಂವಿಧಾನ ಜಾರಿಗೆ ಬಂದು 75ನೇ ವರ್ಷಾಚರಣೆಯ ಅಂಗವಾಗಿ “ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ”ವನ್ನು Institute of Social and Economic Change (ISEC), National Law School of India University, Bengaluru ಇವರ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರುವರಿ 24 ಹಾಗೂ 25  ರಂದು ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಸಮಾವೇಶಕ್ಕೆ ಪೂರ್ವಭಾವಿಯಾಗಿ ಜನವರಿ 26 ರಿಂದ “ಸಂವಿಧಾನ  ಜಾಗೃತಿ ಜಾಥಾ” ಆಯೋಜಿಸಲಾಗುವುದು. ಈ ಜಾಥಾವು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಸಂವಿಧಾನದ ಮಹತ್ವ, ರಾಷ್ಟ್ರೀಯ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಗುವುದು.

ಇಂದಿನ ಸಮಾಜ ಎದುರಿಸುತ್ತಿರುವ ಎಲ್ಲ ಸಮಸ್ಯೆ, ಸವಾಲುಗಳಿಗೆ ಸಂವಿಧಾನದಲ್ಲಿ ಉತ್ತರವಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular