![](https://kannadadunia.com/wp-content/uploads/2023/06/application-web-780x405-1-1.jpg)
ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆಯ ಯೋಜನೆಗಳಾದ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೆöÊಲ್ ಕಿಟ್ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಹ ವಿಕಲಚೇತನರು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಸೇವಾಸಿಂಧು (https://sevasindhu.karnataka.gov.in/Sevasindhu/Kannada) ಪೋರ್ಟ್ಲ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಿದ ಒಂದು ಝರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು.