ನವದೆಹಲಿ: ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೊತ್ತವನ್ನು ಹೆಚ್ಚಳ ಮಾಡುವ ಸಾಧ್ಯತೆ ಇದ್ದು, ಶೀಘ್ರವೇ ಘೋಷಣೆ ಮಾಡಬಹುದು ಎನ್ನಲಾಗಿದೆ.
ಪ್ರಸ್ತುತ ವಾರ್ಷಿಕ 6,000 ರೂ.ಗಳನ್ನು ತಲಾ 2000ರೂ.ನಂ ಮೂರು ಕಂತುಗಳಲ್ಲಿ ಪಾವತಿಸಲಾಗುತ್ತಿದೆ. ಈ ಮೊತ್ತವನ್ನು 8000 ರೂ.ಗೆ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಏಪ್ರಿಲ್ -ಮೇ ನಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೊತ್ತ ಹೆಚ್ಚಿಸುವುದನ್ನು ಗಂಭೀರವಾಗಿ ಪರಿಗಣಿಸಿದೆ.
ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಪ್ರಯೋಜನಗಳನ್ನು ಹೆಚ್ಚಿಸಲು ಕೂಡ ಸರ್ಕಾರ ಚಿಂತನೆ ನಡೆಸಿದ್ದು, ಶೀಘ್ರವೇ ಇವೆರಡು ಯೋಜನೆಗಳ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿ ಮಾಸಿಕ ಪ್ರತಿ ವ್ಯಕ್ತಿಗೆ ಐದು ಕೆಜಿ ಆಹಾರ ಧಾನ್ಯ ನೀಡಲಾಗುತ್ತಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ರೈತರಿಗೆ ವಾರ್ಷಿಕ 6,000 ಪಾವತಿಸಲಾಗುತ್ತಿದೆ. ಇವೆರಡು ಯೋಜನೆಗಳ ಪ್ರಯೋಜನ ಹೆಚ್ಚಳ ಮಾಡುವ ಸಾಧ್ಯತೆ ಇದೆ.