![](https://kannadadunia.com/wp-content/uploads/2023/09/Narayanagowda.jpg)
ಬೆಂಗಳೂರು : ನಾಮಫಲಕಗಲ್ಲಿ ಕನ್ನಡ ಕಡ್ಡಾಯವಾಗಿ ಅಳವಡಿಸಬೇಕು ಎಂದು ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಸೇರಿ ಕರವೇ ಕಾರ್ಯಕರ್ತರು ಇಂದು ಬಿಡುಗಡೆಯಾಗುವ ಸಾಧ್ಯತೆ ಇದೆ.
ನಾರಾಯಣಗೌಡ ಸೇರಿದಂತೆ ಕರವೇ ಕಾರ್ಯಕರ್ತರಿಗೆ ದೇವನಹಳ್ಳಿ ಐದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿತ್ತು. ಇಂದು ಎಲ್ಲರೂ ಬಿಡುಗಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಹಳೆಯ ಪ್ರಕರಣವೊಂದಕ್ಕೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಇಂದು ನಾರಾಯಣಗೌಡ ಅವರನ್ನು ಕೋರಮಂಗಲದ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.