HomeKarnatakaSHOCKING NEWS: ಸ್ವಂತ ಮಗುವನ್ನೇ ಕೊಂದು ಸೂಟ್ ಕೇಸ್ ನಲ್ಲಿ ಶವವಿಟ್ಟು ಸಾಗಿಸಿದ ತಾಯಿ; ಸ್ಟಾರ್ಟ್...

SHOCKING NEWS: ಸ್ವಂತ ಮಗುವನ್ನೇ ಕೊಂದು ಸೂಟ್ ಕೇಸ್ ನಲ್ಲಿ ಶವವಿಟ್ಟು ಸಾಗಿಸಿದ ತಾಯಿ; ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಓ ಅರೆಸ್ಟ್

ಚಿತ್ರದುರ್ಗ: ಹೋಟೆಲ್ ನಲ್ಲಿ ತನ್ನ ಸ್ವಂತ ಮಗುವನ್ನೇ ಕೊಂದು ಸೂಟ್ ಕೇಸ್ ನಲ್ಲಿ ಶವ ತುಂಬಿ ರವನಿಸುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಓ ಓರ್ವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಓ ಸುಚನಾ ಸೇಠ್ ಬಂಧಿತ ಆರೋಪಿ. ಸುಚನಾ ಸೇಠ್ ತನ್ನ ಪುಟ್ಟ ಮಗನೊಂದಿಗೆ ಗೋವಾದ ಹೋಟೆಲ್ ಗೆ ಬಂದಿದ್ದರು. ಈ ವೇಳೆ ಹೋಟೆಲ್ ರೂಮ್ ನಲ್ಲಿ ಮಗನ ಹತ್ಯೆ ಮಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹೋಟೆಲ್ ರೂಂ ಖಾಲಿ ಮಾಡಿ ಬೆಂಗಳೂರಿಗೆ ಹೊರಡಲು ಸಿದ್ಧರಾಗಿದ್ದ ಸುಚನಾ ಟ್ಯಾಕ್ಸಿಯತ್ತ ಸೂಟ್ ಕೇಸ್ ಹಿಡಿದು ಸಾಗುತ್ತಿದ್ದಾಗ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ, ನಿಮ್ಮ ಜೊತೆ ಬಂದಿದ್ದ ಮಗು ಎಲ್ಲಿ ಎಂದು ವಿಚಾರಿಸಿದ್ದಾರೆ. ಆಗ ಸುಚನಾ ಮಗುವನ್ನು ಸಂಬಂಧಿಕರ ಮನೆಗೆ ಕಳುಹಿಸಿದ್ದೇನೆ ಎಂದು ಹೇಳಿ ಟ್ಯಾಕ್ಸಿ ಹತ್ತಿ ಬೆಂಗಳೂರಿಗೆ ಹೊರಟಿದ್ದಾರೆ. ಸಿಬ್ಬಂದಿಗಳಿಗೆ ಅನುಮಾನ ಹೆಚ್ಚಾಗಿದೆ. ತಕ್ಷಣ ಅವರು ತಂಗಿದ್ದ ಹೋಟೆಲ್ ರೂಮ್ ಗೆ ಸ್ವಚ್ಛತೆಗೆ ಸಿಬ್ಬಂದಿ ಕಳುಹಿಸಿದ್ದಾರೆ. ಈ ವೇಳೆ ರೂಮ್ ನಲ್ಲಿ ರಕ್ತದ ಕಲೆಗಳು ಬಿದ್ದಿರುವುದು ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೋಟೆಲ್ ನವರು ಕೂಡಲೇ ಗೋವಾ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಟ್ಯಾಕ್ಸಿ ನಂಬರ್ ನ್ನು ಕೊಟ್ಟಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಟ್ಯಾಕ್ಸಿ ಚಾಲಕನನ್ನು ಪತ್ತೆ ಮಾಡಿ ಕರೆ ಮಾಡಿ ತೆರಳುತ್ತಿದ್ದ ಮಾರ್ಗದಲ್ಲಿಯೇ ಪೊಲೀಸ್ ಠಾಣೆ ಸಿಕ್ಕ ಕೂಡಲೇ ಟ್ಯಾಕ್ಸಿ ನಿಲ್ಲಿಸುವಂತೆ ಹೇಳಿದ್ದಾರೆ. ಪೊಲೀಸರ ಸೂಚನೆಯಂತೆ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಐನಮಂಗಲ ಠಾಣೆ ಬಳಿ ಚಾಲಕ ಕಾರು ನಿಲ್ಲಿಸುತ್ತಿದ್ದಂತೆ ಪೊಲೀಸರು ಸುಚನಾಳನ್ನು ವಶಕ್ಕೆ ಪಡೆದ ಪಡೆದಿದ್ದಾರೆ. ಕಾರಿನ ಡಿಕ್ಕಿಯಲ್ಲಿದ್ದ ಸೂಟ್ ಕೇಸ್ ತೆಗೆದು ಪರಿಶೀಲಿಸಿದಾಗ ಅದರಲ್ಲಿ ಮಗುವಿನ ಶವ ಪತ್ತೆಯಾಗಿದ್ದು, ಅರೆಕ್ಷಣ ಪೊಲೀಸರೇ ಶಾಕ್ ಆಗಿದ್ದಾರೆ.

ಗೋವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸುಚನಾಳನ್ನು ಗೋವಾ ಪೊಲೀಸರಿಗೆ ಒಪ್ಪಿಸಲು ಸಿದ್ಧತೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular