ಬೆಂಗಳೂರು : ಸಿರಿಧಾನ್ಯ ಬೆಳೆಯುವ ರೈತರಿಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಗುಡ್ ನ್ಯೂಸ್ ನೀಡಿದ್ದು, ಪ್ರೋತ್ಸಾಹ ಧನ ಹೆಚ್ಚಳ ಮಾಡುವ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ ಎಂದರು.
ಈ ಬಗ್ಗೆ ಮಾಹಿತಿ ನೀಡಿದ ಸಚಿವರು ‘ ರಾಜ್ಯದ ಎಲ್ಲಾ ಜಿಲ್ಲೆಗಳ ರೈತರು ಹೆಚ್ಚು ಹೆಚ್ಚು ಸಿರಿಧಾನ್ಯಗಳನ್ನು ಬೆಳೆಯಬೇಕು. ಕಡಿಮೆ ಖರ್ಚು, ಕಡಿಮೆ ಸಮಯದಲ್ಲಿ ಬೆಳೆದು ಆರ್ಥಿಕ ಸ್ವಾವಲಂಬನೆ ಸಾಧಿಸಬಹುದು. ಪ್ರಸ್ತುತ ಹೆಕ್ಟೇರ್ ಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಅದನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ಎಂದು ಕೂಡ ಹೇಳಿದ್ದಾರೆ. ಈ ಮೂಲಕ ಸಿರಿಧಾನ್ಯ ಬೆಳೆಯುವ ರೈತರಿಗೆ ಮತ್ತಷ್ಟು ಪ್ರೋತ್ಸಾಹ ಸಿಗಲಿದೆ.