ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಜನವರಿ 10) ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ – 2024 ರ ಹತ್ತನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.
ಇಂದು ಅಹ್ಮದಾಬಾದ್ ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಗುಜರಾತ್ ಮುಖ್ಯಮಂತ್ರಿ ಭೂಪೇಂದರ್ ಪಟೇಲ್, ರಾಜ್ಯಪಾಲ ಆಚಾರ್ಯ ದೇವವ್ರತ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್.ಪಾಟೀಲ್ ಸ್ವಾಗತಿಸಿದರು.
ಶೃಂಗಸಭೆಯು ಬುಧವಾರದಿಂದ ಶುಕ್ರವಾರದವರೆಗೆ ನಡೆಯಲಿದ್ದು, 34 ಪಾಲುದಾರ ರಾಷ್ಟ್ರಗಳು ಮತ್ತು 16 ಪಾಲುದಾರ ಸಂಸ್ಥೆಗಳನ್ನು ಒಳಗೊಂಡಿದೆ.
ಜನವರಿ 10 ರಂದು ಬೆಳಿಗ್ಗೆ 9.45 ರ ಸುಮಾರಿಗೆ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆ 2024 ಅನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಬಳಿಕ ಟಾಪ್ ಗ್ಲೋಬಲ್ ಕಂಪನಿಗಳ ಸಿಇಒಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಪ್ರಧಾನಿ ಮೋದಿ ಗಿಫ್ಟ್ ಸಿಟಿಗೆ ಪ್ರಯಾಣಿಸಲಿದ್ದಾರೆ.