alex Certify BIG NEWS : SC, ST ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಅಂತರ್ ಜಾತಿ ವಿವಾಹಕ್ಕೆ 2 ಲಕ್ಷ ಪ್ರೋತ್ಸಾಹಧನ ಮಂಜೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : SC, ST ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಅಂತರ್ ಜಾತಿ ವಿವಾಹಕ್ಕೆ 2 ಲಕ್ಷ ಪ್ರೋತ್ಸಾಹಧನ ಮಂಜೂರು

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ / ಯುವತಿಯರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದಲ್ಲಿ 2 ಲಕ್ಷ ಪ್ರೋತ್ಸಾಹಧನ ನೀಡುವು ದಕ್ಕೆ ಮಂಜೂರಾತಿ  ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಸರ್ಕಾರಿ ಆದೇಶ ಸಂಖ್ಯೆ: ಸಕಇ 149 ಎಸ್ಎಲ್‌ಪಿ 2017, ಬೆಂಗಳೂರು, ದಿನಾಂಕ:17-04-2017 ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2017-18ನೇ ಸಾಲಿನಲ್ಲಿ ಆಯವ್ಯಯ ಭಾಷಣದ ಘೋಷಣೆಯನ್ನಯ ಪರಿಶಿಷ್ಟ ಜಾತಿಯ / ಪರಿಶಿಷ್ಟ ಪಂಗಡದ ಯುವಕ / ಯುವತಿಯರು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದಲ್ಲಿ ಅಂತಹವರಿಗೆ ರೂ. 2.00 ಲಕ್ಷಗಳ ಪ್ರೋತ್ಸಾಹ ಧನ ನೀಡಲು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಸರ್ಕಾರ ಮಂಜೂರಾತಿ ನೀಡಿ ಆದೇಶಿಸಿದೆ.

ಷರತ್ತುಗಳು

1. ಅಂತರ್ ಜಾತಿ ವಿವಾಹವಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ / ಯುವತಿಯರು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸೇರಿದವರಾಗಿರಬೇಕು.

2. ಈ ಸೌಲಭ್ಯ, ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವತಿಯರ ವಯೋಮಾನವು ಕನಿಷ್ಟ 18 ವರ್ಷದಿಂದ ಗರಿಷ್ಟ 42 ವರ್ಷಗಳಾಗಿರತಕ್ಕದ್ದು. ಯುವಕನಿಗೆ ಕನಿಷ್ಟ 21 ವರ್ಷದಿಂದ ಗರಿಷ್ಟ 45 ವರ್ಷ ವಯಸ್ಸು ಆಗಿರತಕ್ಕದ್ದು.

3. ಈ ಯೋಜನೆಯಡಿ ಪ್ರೋತ್ಸಾಹ ಧನ ಪಡೆಯಲು ದಂಪತಿಗಳ ಒಟ್ಟಾರೆ ವಾರ್ಷಿಕ ಆದಾಯವು ರೂ. 2.00 ಲಕ್ಷಗಳನ್ನು ಮೀರತಕ್ಕದ್ದಲ್ಲ.

4. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಯುವಕ / ಯುವತಿಯರು ಮದುವೆಯಾದ ಒಂದು ವರ್ಷದ ಅವಧಿಯೊಳಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸತಕ್ಕದ್ದು.

5. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಯುವಕ / ಯುವತಿಯರು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸುವ ಮುಂಚೆ ಉಪ ನೋಂದಾಣಾಧಿಕಾರಿಗಳ ಕಛೇರಿಯಲ್ಲಿ ವಿವಾಹದ ಬಗ್ಗೆ ನೋಂದಾಯಿಸಿರಬೇಕು.

6. ಈ ಸೌಲಭ್ಯವನ್ನು ಒಮ್ಮೆ ಮಾತ್ರ ಪಡೆಯಬಹುದಾಗಿದೆ.

7. ಪರಿಶಿಷ್ಟ 203 ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ಅಂತರ್ ವಿವಾಹವಾದ ಯುವಕ ವಾಸ್ತವ್ಯವಿರುವ ಜಿಲ್ಲೆಯಲ್ಲಿ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

8. ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮದಡಿ ಅಂತರ್ ಜಾತಿ ವಿವಾಹ ಅಥವಾ ಏಧವೆಯರ ಮರು ವಿವಾಹ ಯೋಜನೆಗಳಡಿ ಪ್ರೋತ್ಸಾಹ ಧನ ಪಡೆದವರು ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಲ್ಲ.

9. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಯುವಕ / ಯುವತಿಯರು ಸರಳ ವಿವಾಹ ಕಾರ್ಯಕ್ರಮದಡಿ ಮದುವೆಯಾದಲ್ಲ. ಅಂತಹವರುಗಳು ಯೋಜನೆಯಡಿಯಲ್ಲಿ ಸರಳ ವಿವಾಹದ ರೂ.50.000/- ಹೊರತುಪಡಿಸಿ ಉಳಿದ ರೂ.1.50 ಲಕ್ಷ ಪ್ರೋತ್ಸಾಹ ಧನವನ್ನು ಪಡೆಯಲು ಅರ್ಹರಿರುತ್ತಾರೆ.

10. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ ಯುವತಿಯರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭಾರತ ಸರ್ಕಾರದ ಅಧಿಸೂಚನೆಯಂತೆ ಪ್ರಕಟಿಸಲಾದ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಪಟ್ಟಿಯಲ್ಲಿ ಒಂದೇ ಸಂಖ್ಯೆಯಲ್ಲಿ ನಮೂದಿಸಿರುವ ಸಮನಾಂತರ ಜಾತಿಗಳ ಒಳಗೆ ಮದುವೆಯಾದಲ್ಲಿ ಈ ಪ್ರೋತ್ಸಾಹ ಧನ ಪಡೆಯಲು ಅರ್ಹರಿರುವುದಿಲ್ಲ.

11. ಮಂಜೂರಾದ ಪ್ರೋತ್ಸಾಹಧನದ ಹಣವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ವಿವಾಹವಾದ ದಂಪತಿಗಳ ಜಂಟಿ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ NEFT ಮೂಲಕ ಜಮಾ ಮಾಡುವುದು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...