ರಾಜ್ಯದ ಬಡ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ʻಶುಚಿ, ಅಪ್ಪು ಹೃದಯ ಜ್ಯೋತಿʼ ಯೋಜನೆ ಜಾರಿಗೆ ಸಿದ್ಧತೆ

ಬೆಂಗಳೂರು : ರಾಜ್ಯ ಸರ್ಕಾರವು ಬಡಜನತೆಗೆ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಇಲಾಖೆಯ ಮಹತ್ವದ ಯೋಜನೆಗಳಾದ ಶುಚಿ, ಗೃಹ ಆರೋಗ್ಯ, ಪುನಿತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿಗೆ ಸಿದ್ಧತೆ ನಡೆಸಲಾಗಿದೆ.

ಈ ಕುರಿತು ಇಂದು ಆರೋಗ್ಯ ಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ  ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌, ನಮ್ಮ ಇಲಾಖೆಯ ಮಹತ್ವದ ಯೋಜನೆಗಳಾದ ಶುಚಿ, ಗೃಹ ಆರೋಗ್ಯ, ಪುನಿತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿಗೆ ಸಿದ್ಧತೆ, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣ, ಅಗತ್ಯ ಇರುವ ಕೇಂದ್ರಗಳಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿಗಳ ನೇಮಕ ಸೇರಿದಂತೆ ಪ್ರಮುಖ ವಿಚಾರಗಳ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ.

85 ರಷ್ಟು ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಖಾಸಗಿಯ 50 ಕ್ಕೂ ಹೆಚ್ಚು ಆಸ್ಪತ್ರೆಗಳನ್ನು ಈ ಯೋಜನೆಗೆ ಜೋಡಿಸುವ ಕೆಲಸವಾಗುತ್ತಿದ್ದು, ಶೀಘ್ರವೇ ಈ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಆರೋಗ್ಯ ಇಲಾಕೆಯ ಮೂಲಕ ಯೋಜನೆ ರೂಪಿಸಿದ್ದು, ಇದಕ್ಕೆ ಚಿತ್ರನಟ ದಿ.ಪುನೀತ್ ರಾಜ್ ಕುಮಾರ್ ಅವರ ನೆನಪಿನಲ್ಲಿ `ಪುನೀತ್ ರಾಜ್ ಕುಮಾರ್ ಹೃದಯಜ್ಯೋತಿ’ ಎನ್ನುವ ಹೆಸರಿಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read