ಬೆಂಗಳೂರು : ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 3 ವಿದೇಶಿ ಮಹಿಳೆಯರನ್ನು ಬಂಧಿಸಿದ್ದಾರೆ.
ಹಲಸೂರು ಮತ್ತು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬೆಂಗಳೂರಿನ ಖಾಸಗಿ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಖಾಸಗಿ ಹೋಟೆಲ್ ಗಳಿಗೆ ವಿದೇಶಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು. ಘಟನೆಗೆ ಸಂಬಂಧಿಸಿದಂತೆ ವಿದೇಶಿ ಮೂಲದ ಮೂವರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ .
ವಾಟ್ಸಪ್ ಹಾಗೂ ಟೆಲಿಗ್ರಾಂ ಮೂಲಕ ಗಿರಾಕಿಗಳನ್ನು ಸೆಳೆಯಲಾಗುತ್ತಿತ್ತು, ಬೆಂಗಳೂರು, ಜೈಪುರ್, ಚೆನ್ನೈ, ಮೈಸೂರು, ದೆಹಲಿ, ಉದಯಪುರ ಹಾಗೂ ಮುಂಬೈ ಮುಂತಾದ ಕಡೆ ಆರೋಪಿಗಳು ಏಜೆಂಟ್ ಗಳನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಸದ್ಯ, ಮೂವರು ವಿದೇಶಿ ಮಹಿಳೆಯರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.