HomeKarnatakaBIG NEWS: ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

BIG NEWS: ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಗಳನ್ನು ಮಾಡಿರುವ ವಿಪಕ್ಷ ಬಿಜೆಪಿ, ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದೆ.

ರೈತ ಹಾಗೂ ಕೃಷಿ ಕಾರ್ಮಿಕ ವಿರೋಧಿ ನೀತಿಗಳ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

ನಿಯೋಗದಲ್ಲಿ ಮಾಜಿ ಸಿಎಂ ಗಳಾದ ಡಿ.ವಿ.ಸದಾನಂದಗೌದ, ಬಸವರಾಜ್ ಬೊಮ್ಮಾಯಿ, ಶಾಸಕರಾದ ಡಾ.ಅಶ್ವತ್ಥನಾರಾಯಣ, ಎಸ್.ಮುನಿರಾಜು, ಸಿ.ಕೆ.ರಾಮಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular