ನವದೆಹಲಿ : ಯಾರೂ ಕೂಡ ವಿವಾದಾತ್ಮಕ, ಪ್ರಚೋದಾತ್ಮಕ ಹೇಳಿಕೆ ನೀಡಬೇಡಿ ಎಂದು ಕೇಂದ್ರ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.
ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಟಾಪನೆ ಕಾರ್ಯಕ್ರಮ ನಡೆಯಲಿದೆ, ಕಾರ್ಯಕ್ರಮ ಮುಗಿಯುವವರೆಗೂ ಶಾಂತಿಯುತವಾಗಿ ಇರಿ, ಯಾರೂ ಕೂಡ ವಿವಾದಾತ್ಮಕ, ಪ್ರಚೋದಾತ್ಮಕ ಹೇಳಿಕೆ ನೀಡಬೇಡಿ ಎಂದು ಕೇಂದ್ರ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.
ಅಯೋಧ್ಯೆ ರಾಮ ದೇವಾಲಯದ ಅಭಿಷೇಕ ಸಮಾರಂಭವು ಜನವರಿ 22, 2024 ರಂದು ನಡೆಯಲಿದೆ. ‘ರಾಮ್ ಲಲ್ಲಾ’ ಪ್ರತಿಷ್ಠಾಪನಾ ಸಮಾರಂಭಕ್ಕೆ ಆಮಂತ್ರಣ ಪತ್ರಿಕೆಗಳನ್ನು ವಿತರಿಸುವ ಪ್ರಕ್ರಿಯೆ ಕೂಡ ನಡೆಯುತ್ತಿದೆ.