HomeKarnatakaಮೂವರು ಯಶ್ ಅಭಿಮಾನಿಗಳ ಸಾವು : 2 ಎಕರೆ ಜಮೀನು ನೀಡಿ ಮೃತರ ಪುತ್ಥಳಿ ನಿರ್ಮಿಸಿ-...

ಮೂವರು ಯಶ್ ಅಭಿಮಾನಿಗಳ ಸಾವು : 2 ಎಕರೆ ಜಮೀನು ನೀಡಿ ಮೃತರ ಪುತ್ಥಳಿ ನಿರ್ಮಿಸಿ- ಸೂರಣಗಿ ಗ್ರಾಮಸ್ಥರ ಆಗ್ರಹ

ಗದಗ : ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.

ಘಟನೆ ಹಿನ್ನೆಲೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ 2 ಲಕ್ಷ ಪರಿಹಾರ ಘೋಷಿಸಿದೆ. ಮೂವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡುವಂತೆ ಲಕ್ಷ್ಮೇಶ್ವರ ಸೂರಣಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 2 ಎಕರೆ ಜಮೀನು ನೀಡಬೇಕು. ಘಟನಾ ಸ್ಥಳದಲ್ಲಿ ಮೃತರ ಪುತ್ಥಳಿ ನಿರ್ಮಿಸಬೇಕು. ಇನ್ನುಮುಂದೆ ಇಂತಹ ಅವಘಡಗಳು ನಡೆಯಬಾರದು ಎಂದರೆ ಘಟನಾ ಸ್ಥಳದಲ್ಲಿ ಮೃತರ ಪುತ್ಥಳಿ ನಿರ್ಮಿಸಬೇಕು ಎಂದು ಲಕ್ಷ್ಮೇಶ್ವರ ಸೂರಣಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ ಘಟನೆ ಸಂಬಂಧ ನಟ ಯಶ್ ಕೂಡ ನಿನ್ನೆ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದರು.

ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಹನುಮಂತ ಹರಿಜನ(21), ಮುರಳಿ ನಡುವಿನಮನೆ(20), ನವೀನ್(19) ಮೃತಪಟ್ಟಿದ್ದಾರೆ. ಮಂಜುನಾಥ, ದೀಪಕ್, ಪ್ರಕಾಶ್ ಗಂಭೀರವಾಗಿ ಗಾಯಗೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular