alex Certify BIG NEWS : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 170 ಕೋಟಿ ರೂ. ವಿದ್ಯಾರ್ಥಿ ವೇತನ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 170 ಕೋಟಿ ರೂ. ವಿದ್ಯಾರ್ಥಿ ವೇತನ ಬಿಡುಗಡೆ

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು 170 ಕೋಟಿ ರೂ. ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ 1 ರಿಂದ 8 ನೇ ತರಗತಿವರೆಗಿನ 2,35, 661 ವಿದ್ಯಾರ್ಥಿಗಳಿಗೆ 1 ಸಾವಿರ ರೂ. ನಿಂದ 3,500 ರೂ. ವರೆಗೆ 90.30 ಕೋಟಿ ರೂ. ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ 280 ವಿದ್ಯಾರ್ಥಿಗಳಿಗೆ ತಲಾ 20 ಲಕ್ಷ ರೂ. ನಂತೆ 25.27 ಕೋಟಿ ರೂ., ಪಿಎಚ್ ಡಿ, ಎಂ ಫಿಲ್ ವ್ಯಾಸಂಗ ಮಾಡುವ 308 ವಿದ್ಯಾರ್ಥಿಗಳಿಗೆ ಮಾಸಿಕ 10 ಸಾವಿರ ರೂ. ನಂತೆ 3.50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಅಂತ ಮಾಹಿತಿ ನೀಡಿದರು,

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಹಾಗೂ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ಸೌಲಭ್ಯದ ಆರ್ಥಿಕ ನೆರವು ಬಿಡುಗಡೆಗೆ ಚಾಲನೆ ನೀಡಿದರು. ಹಾಗೂ ಐಐಟಿ, ಐಐಎಂ ಪ್ರವೇಶ ಪಡೆದಿರುವ 19 ವಿದ್ಯಾರ್ಥಿಗಳಿಗೆ ತಲಾ 2 ಲಕ್ಷ ರೂ. ನಂತೆ 38 ಲಕ್ಷ ರೂ. ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ಸೌಲಭ್ಯ ಸಿಗದ 3,330 ವಿದ್ಯಾರ್ಥಿಗಳಿಗೆ ತಲಾ 1,500 ರೂ. ನಂತೆ 13.50 ಕೋಟಿ ರೂ. ಬಿಡುಗಡೆ ಮಾಡಲಾಯಿತು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...