ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಿಂದ ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
18 ರಿಂದ 45 ವರ್ಷದೊಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಜನವರಿ 17 ಕೊನೆಯ ದಿನವಾಗಿದೆ. ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಅಥವಾ 8217236973, 9483485489, 9482188780 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.