ಬೆಂಗಳೂರು : ಜನವರಿ 12 ರಂದು ಯುವನಿಧಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿಕೆಶಿ ನಮ್ಮ ಸರ್ಕಾರದ 5ನೇ ಗ್ಯಾರಂಟಿಯಾಗಿರುವ “ಯುವನಿಧಿ”ಗೆ ಜನವರಿ 12ರ ಸ್ವಾಮಿ ವಿವೇಕಾನಂದ ಅವರ ಜಯಂತಿಯಂದು ಚಾಲನೆ ದೊರೆಯಲಿದೆ. ಈಗಾಗಲೇ ಯುವನಿಧಿ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
![](https://kannadadunia.com/wp-content/uploads/2024/01/dks-5.jpg)