ಗೋವಾ : 4 ವರ್ಷದ ಮಗನನ್ನು ಕೊಂದ ಹಂತಕಿ ತಾಯಿ ಸುಚನಾಳನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಗೋವಾ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣ ಸಂಬಂಧ ಗೋವಾದ ಮಾಪುಸಾ ಕೋರ್ಟ್ ಗೆ ಹಂತಕಿ ಸುಚನಾಳನ್ನು ಪೊಲೀಸರು ಒಪ್ಪಿಸಿದ್ದರು. ನಂತರ ವಿಚಾರಣೆ ನಡೆಸಿದ ಕೋರ್ಟ್ ಸುಚನಾಳನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಹೋಟೆಲ್ ನಲ್ಲಿ ತನ್ನ ಸ್ವಂತ ಮಗುವನ್ನೇ ಕೊಂದು ಸೂಟ್ ಕೇಸ್ ನಲ್ಲಿ ಶವ ತುಂಬಿ ರವಾನಿಸುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಓ ಓರ್ವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಠಾಣೆ ಪೊಲೀಸರು ಬಂಧಿಸಿದ್ದರು. ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಓ ಸುಚನಾ ಸೇಠ್ ಬಂಧಿತ ಆರೋಪಿಯಾಗಿದ್ದು, ಈಕೆ ಪುಟ್ಟ ಮಗನೊಂದಿಗೆ ಗೋವಾದ ಹೋಟೆಲ್ ಗೆ ಬಂದಿದ್ದು, ಈ ವೇಳೆ ಹೋಟೆಲ್ ರೂಮ್ ನಲ್ಲಿ ಮಗನ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಂತರ ಈಕೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನಲಾಗಿದೆ. ಕಾರಿನ ಡಿಕ್ಕಿಯಲ್ಲಿದ್ದ ಸೂಟ್ ಕೇಸ್ ತೆಗೆದು ಪರಿಶೀಲಿಸಿದಾಗ ಅದರಲ್ಲಿ ಮಗುವಿನ ಶವ ಪತ್ತೆಯಾಗಿದ್ದು, ಪೊಲೀಸರು ಶಾಕ್ ಆಗಿದ್ದರು.
ಸುಚನಾ ಪಶ್ಚಿಮ ಬಂಗಾಳದ ಕೋಲ್ಕತ್ತಾ ಮೂಲದವರಾಗಿದ್ದು, ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಳು. ಬೆಂಗಳೂರಿನ ರೆಸಿಡೆನ್ಸಿ ರಸ್ತೆಯಲ್ಲಿರುವ ದಿ ಮೈಂಡ್ಫುಲ್ ಎಐ ಲ್ಯಾಬ್ನ ಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿದ್ದಾಳೆ.