ಮಂಗಳೂರು : ಮಂಗಳೂರು ಏರ್ ಪೋರ್ಟ್ ನಲ್ಲಿ ಭರ್ಜರಿ ಚಿನ್ನದ ಬೇಟೆಯಾಡಿದ ಅಧಿಕಾರಿಗಳು 98,68,750 ಮೌಲ್ಯದ ಅಕ್ರಮ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಮೂಲಕ ಅಬುಧಾಬಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕ ಏರ್ ಪೋರ್ಟ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಪ್ರಯಾಣಿಕನನ್ನು ವಿಚಾರಣೆ ನಡೆಸಿ ಪರಿಶೀಲನೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.
ಈತ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮಾಡಿಕೊಂಡು ಅದನ್ನು ಗುದನಾಳದಲ್ಲಿ ಇಟ್ಟುಕೊಂಡು ಸಾಗಾಟ ಮಾಡುತ್ತಿದ್ದನು. ಈ ಚಿನ್ನದ ಮೌಲ್ಯ ಸುಮಾರು ರೂ. 98,68,750 ಆಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಆರೋಪಿಯನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.
ಸಾಂದರ್ಭಿಕ ಚಿತ್ರ