ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೋವಿಡ್ ಪಾಸಿಟಿವ್ ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೊರೊನಾ ಸೋಂಕು ಧೃಡವಾದ ಹಿನ್ನೆಲೆ ಮುಂದಿನ ದಿನಾಂಕದವರೆಗೆ ಅವರ ನಿಗದಿತ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದ್ದು, ರಾಜಭವನದಲ್ಲಿ ಅವರಿಗೆ ಹೋಮ್ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.