HomeKarnatakaರಾಜ್ಯದಲ್ಲಿಂದು ಕೊರೋನಾದಿಂದ ಇಬ್ಬರು ಸಾವು: 252 ಜನರಿಗೆ ಸೋಂಕು ದೃಢ

ರಾಜ್ಯದಲ್ಲಿಂದು ಕೊರೋನಾದಿಂದ ಇಬ್ಬರು ಸಾವು: 252 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 252 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೈಸೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 7359 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ 1031 ಸಕ್ರಿಯ ಪ್ರಕರಣಗಳಿದ್ದು, 441 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 3.42ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 172 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಹಾಸನ ಜಿಲ್ಲೆ 20, ಮೈಸೂರು 8, ವಿಜಯನಗರ ಜಿಲ್ಲೆ 7 ಹೊಸ ಕೇಸ್ ಪತ್ತೆಯಾಗಿವೆ. ರಾಯಚೂರು, ಬಳ್ಳಾರಿ, ಧಾರವಾಡ ಜಿಲ್ಲೆಯಲ್ಲಿ ತಲಾ 6 ಪ್ರಕರಣ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ 5 ಕೇಸ್ ಗಳು ಪತ್ತೆಯಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣಕನ್ನಡ, ಗದಗ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ತಲಾ 3 ಪ್ರಕರಣಗಳು ಪತ್ತೆಯಾಗಿದ್ದು, ಚಿಕ್ಕಬಳ್ಳಾಪುರ 2, ಕೋಲಾರ, ತುಮಕೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular